ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಎರಡು ದಿನ ಸಿಐಡಿ ಕಸ್ಟಡಿಗೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರೇವಣ್ಣ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಸೂರಜ್ ರೇವಣ್ಣ ಅವರ ಸಿಐಡಿ ಕಸ್ಟಡಿ ಅವಧಿ ಇಂದು ಮುಕ್ತಾಯಗೊಂಡಿತ್ತು. ಹೀಗಾಗಿ ಕೋರ್ಟ್ಗೆ ಅವರನ್ನು ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ತನ್ನದೇ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕಳೆದ ತಿಂಗಳು ಪ್ರಕರಣ ದಾಖಲಾಗಿತ್ತು. ನಂತರ ಜೂನ್‌ 22ರಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.

ಜನಪ್ರತಿನಿಧಿಗಳ ಕೋರ್ಟ್ಗೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಸೂರಜ್‌ ಅವರನ್ನು ಮತ್ತೆ ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿ ಆದೇಶಿಸಿದೆ.

More articles

Latest article

Most read