ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

Most read

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನನ್ನು 42 ಎಸಿಎಂಎಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ 42 ಎಸಿಎಂಎಂ ಕೋರ್ಟ್ ಇಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

27 ವರ್ಷದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.

More articles

Latest article