ಸೂರಜ್‌ ರೇವಣ್ಣ ವಿರುದ್ಧ ದೂರು ದಾಖಲಾದರೆ ಕ್ರಮ : ಗೃಹ ಸಚಿವ ಪರಮೇಶ್ವರ

Most read

ಜೆಡಿಎಸ್ ಎಂಎಲ್​ಸಿ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಏನು ಎಂಬುದನ್ನು ನೋಡಿ ಅದರ ನೈಜ್ಯತೆಯನ್ನು ಪರಿಶೀಲಿಸಿ ನಂತರ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಸೂರಜ್‌ ಕುರಿತಾದ ಸುದ್ದಿಗಳನ್ನು ನಾನು ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಅಧಿಕೃತವಾಗಿ ಯಾವುದೇ ದೂರು ದಾಖಲಾಗಿಲ್ಲ. ಸುದ್ದಿ ಮಾಧ್ಯಮಗಳಲ್ಲಿ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ. ಆದರೆ ನನಗೆ ಯಾವುದೇ ಪತ್ರ ತಲುಪಿಲ್ಲ. ಪ್ರಕರಣ ಏನು ಎಂಬುದನ್ನು ನೋಡಿ ಅದರ ನೈಜ್ಯತೆಯನ್ನು ಪರಿಶೀಲಿಸಿ ನಂತರ ಪ್ರಕರಣವನ್ನು ಸಿಐಡಿಗೆ ಕೊಡುವ ಯೋಚನೆ ಮಾಡುತ್ತೇವೆ. ಮೊದಲು ದೂರು ದಾಖಲಾಗಲಿ ನಂತರ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ ಅವರ ಸಹೋದರ ಸೂರಜ್ ವಿರುದ್ಧವೂ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತನೊರ್ವ ಸೂರಜ್ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು  ತಿಳಿದುಬಂದಿದೆ.

More articles

Latest article