ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ಹಸ್ತಾಂತರ

Most read

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.

ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿ ಎಫ್ ಐ ಆರ್ ಸಹ ಆಗಿತ್ತು. ಪ್ರರಕಣದ ಸಂಬಂಧ ಸೂರಜ್ ರೇವಣ್ಣರನ್ನು ಭಾನುವಾರ ಬಂಧಿಸಲಾಗಿದೆ. ಸದ್ಯ ಆರೋಪಿಯ ವೈದ್ಯಕೀಯ ಪರೀಕ್ಷೆ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377, 342, 506, 36 ಅಡಿ ಕೇಸ್ ದಾಖಲಾಗಿದೆ. ಕರ್ನಾಟಕ ಸರ್ಕಾರ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ. ಸದ್ಯ ಆರೋಪಿ ಹಾಸನ ಪೊಲೀಸರ ವಶದಲ್ಲಿದ್ದಾನೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ವ್ಯಕ್ತಿ ದುಡ್ಡಿಗಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಕುರಿತು ವಿವರಣೆ ನೀಡಲು ಠಾಣೆಗೆ ಬಂದಿದ್ದ ಸೂರಜ್ ರೇವಣ್ಣರನ್ನು ಪೊಲೀಸರು ಶನಿವಾರ ತಮ್ಮ ವಶಕ್ಕೆ ಪಡೆದಿದ್ದರು. ಭಾನುವಾರ ಅಧಿಕೃತವಾಗಿ ಬಂಧಿಸಿದ್ದಾರೆ.

More articles

Latest article