ಸೂರಜ್​ ರೇವಣ್ಣನಿಂದ ಯುವಕನ ಮೇಲೆ ಅಸಹಜ ಲೈಂಗಿಕ ಕ್ರಿಯೆ ಆರೋಪ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್​​ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ ಸೂರಜ್​ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ..

ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನರಾಯಪಟ್ಟಣದ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ.

ಸೂರಜ್ ರೇವಣ್ಣ ಜೆಡಿಎಸ್​ ವಿಧಾನಪರಿಷತ್ ಸದಸ್ಯರಾಗಿದ್ದರಿಂದ ಈ ಪ್ರಕರಣವೂ ಸಹ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. 

ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್​ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.

More articles

Latest article

Most read