ಅಣ್ಣ ಸುರಜ್ ರೇವಣ್ಣ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ರೇವಣ್ಣ ಜೈಲಿಗೆ : ಕೋರ್ಟ್‌ ಆದೇಶ

Most read

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್‌ ಮತ್ತುತಮ್ಮ ಪ್ರಜ್ವಲ್‌ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್‌ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್‌ ಉತ್ತರ ನೀಡಿದೆ. ಪ್ರಜ್ವಲ್ಗೆ ಜೈಲುವಾಸ ಕಾಯಂ ಆಗಿದೆ. ಹೌದು, ಜುಲೈ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ನೀಡಿದೆ. ಇನ್ನು ಸುರಜ್‌ ಗೆ 8 ದಿನ ಸಿಐಡಿ ವಶಕ್ಕೆ ನೀಡಿ ಆದೇಶಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದರು. ಆದರೆ ಎರಡು ಪ್ರಕರಣಗಳ ವಿಚಾರಣೆಗಾಗಿ ಎಸ್ ಐಟಿ ಮತ್ತೊಮ್ಮೆ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಇಂದಿಗೆ ಅವರ ಎಸ್ ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು 42 ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಇಂದು ಕೋರ್ಟ್‌ ಆತನಿಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿರುವ ಸೂರಜ್‌ ರೇವಣ್ಣನನ್ನು ನುನ್ನೆ ಪೊಲೀಸ್ರು ಬಂಧಿಸಿ ನ್ಯಾಯಾಂಗ ಬಂದನಕ್ಕೆ ನೀಡಿದ್ದರು. ಈಗ 42ನೇ ACMM ಕೋರ್ಟ್ ಸೂರಜ್ ರೇವಣ್ಣ 8 ದಿನ ಸಿಐಡಿ ವಶಕ್ಕೆ ನೀಡಿದೆ.

ಸಮಗ್ರ ತನಿಖೆಗೆ ಹೆಚ್ಚಿನ ಸಮಯ ಬೇಕಿತ್ತು 14 ದಿನ ಕಸ್ಟಡಿಗೆ ನೀಡಿ ಎಂದು ಕೋರ್ಟ್‌ಗೆ ಸಿಐಡಿ ಅಧಿಕಾರಿಗಳು ಕೇಳಿದ್ದರು. ಆದರೆ ಕೋರ್ಟ್ 8 ದಿನ CID ಕಸ್ಟಡಿಗೆ ನೀಡಿ ಆದೇಶ. ಜುಲೈ 1 ರವರೆಗೆ ಸಿಐಡಿ ವಶದಲ್ಲಿ ಸೂರ್ಜ್‌ ಇರಲಿದ್ದಾನೆ.

ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿ ಎಫ್ ಐ ಆರ್ ಸಹ ಆಗಿತ್ತು. ಪ್ರರಕಣದ ಸಂಬಂಧ ಸೂರಜ್ ರೇವಣ್ಣರನ್ನು ಭಾನುವಾರ ಬಂಧಿಸಲಾಗಿದೆ. ಸದ್ಯ ಆರೋಪಿಯ ವೈದ್ಯಕೀಯ ಪರೀಕ್ಷೆ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377, 342, 506, 36 ಅಡಿ ಕೇಸ್ ದಾಖಲಾಗಿದೆ. ಕರ್ನಾಟಕ ಸರ್ಕಾರ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ. ಸದ್ಯ ಆರೋಪಿ ಹಾಸನ ಪೊಲೀಸರ ವಶದಲ್ಲಿದ್ದಾನೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ವ್ಯಕ್ತಿ ದುಡ್ಡಿಗಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಕುರಿತು ವಿವರಣೆ ನೀಡಲು ಠಾಣೆಗೆ ಬಂದಿದ್ದ ಸೂರಜ್ ರೇವಣ್ಣರನ್ನು ಪೊಲೀಸರು ಶನಿವಾರ ತಮ್ಮ ವಶಕ್ಕೆ ಪಡೆದಿದ್ದರು. ಭಾನುವಾರ ಅಧಿಕೃತವಾಗಿ ಬಂಧಿಸಿದ್ದಾರೆ.

More articles

Latest article