ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ ಶಂಕೆ: ಐವರು ಪ್ರಯಾಣಿಕರು ಸೇರಿ ಆರು ಮಂದಿ ನಾಪತ್ತೆ!

ಡೆಹ್ರಾಡೂನ್, ಅ.30: ಉತ್ತರಾಖಂಡದ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಪತನಗೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಲಿಕಾಪ್ಟರ್‌ನಲ್ಲಿ ಐವರು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಸೇರಿದಂತೆ ಒಟ್ಟು ಆರು ಮಂದಿ ಇದ್ದು, ಅವರ ಸ್ಥಿತಿಗತಿ ಇನ್ನೂ ತಿಳಿದುಬಂದಿಲ್ಲ.

ಜೋಶಿಮಠ ಸಮೀಪದ ಛಾಯ್ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಹೆಲಿಕಾಪ್ಟರ್ ಪತನವನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಭಾರತೀಯ ಸೇನೆ, ಜಿಲ್ಲಾಡಳಿತ ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (ಎಸ್‌ಡಿಆರ್‌ಎಫ್) ಜಂಟಿಯಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. 

ಹೆಲಿಕಾಪ್ಟರ್‌ನಲ್ಲಿ ಪ್ರತಾಪ, ಅರುಣ್, ಶಂಕರ್ ಗೌಡ, ಸುಧೀರ್ ಕೆ. ಮತ್ತು ಎಚ್.ಎಸ್. ನಟರಾಜ ಎಂಬ ಐವರು ಪ್ರಯಾಣಿಸುತ್ತಿದ್ದರು ಎಂದು ಗುರುತಿಸಲಾಗಿದೆ. ಕ್ಯಾಪ್ಟನ್ ಹಿಮಾಂಶು ಹೆಲಿಕಾಪ್ಟರ್‌ನ ಪೈಲಟ್ ಆಗಿದ್ದರು.

ಪ್ರಯಾಣಿಕರು ಹಾಗೂ ಪೈಲಟ್ ಸುರಕ್ಷಿತವಾಗಿದ್ದಾರೆಯೇ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸಾವು-ನೋವು ಸಂಭವಿಸಿರುವ ಕುರಿತೂ ಅಧಿಕಾರಿಗಳು ದೃಢಪಡಿಸಿಲ್ಲ.

ಜೋಶಿಮಠ ಕಣಿವೆಯಲ್ಲಿ ಸಂಪರ್ಕ ಕಡಿತ

ಟ್ರಾನ್ಸ್ ಭಾರತ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ VT-HCX ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್ ಡೆಹ್ರಾಡೂನ್‌ನ ಸಹಸ್ರಧಾರಾ ಹೆಲಿಪ್ಯಾಡ್‌ಗೆ ತೆರಳುತ್ತಿತ್ತು.

ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (ಯುಸಿಎಡಿಎ) ಮಾಹಿತಿ ಪ್ರಕಾರ, ಮಧ್ಯಾಹ್ನ ಸುಮಾರು 1.14ಕ್ಕೆ ಹೆಲಿಕಾಪ್ಟರ್ ಹಾರಾಟ ಆರಂಭಿಸಿದ್ದು, ಜೋಶಿಮಠ ಕಣಿವೆಯ ಮೇಲೆ ಹಾರುತ್ತಿದ್ದಾಗ ಸಂಪರ್ಕ ಕಡಿತಗೊಂಡಿದೆ. ಹೆಲಿಕಾಪ್ಟರ್‌ನ ಟ್ರ್ಯಾಕಿಂಗ್ ವ್ಯವಸ್ಥೆಯಲ್ಲೂ ಅದರ ಚಲನವಲನ ದಾಖಲಾಗುವುದು ನಿಂತಿದೆ.

ಆದರೆ, ಮತ್ತೊಂದು ವರದಿಯ ಪ್ರಕಾರ ಮಧ್ಯಾಹ್ನ 2.15ರ ಸುಮಾರಿಗೆ ಹಿಮಪಾತದ ನಡುವೆ ಬದರಿನಾಥದಿಂದ ಹೊರಟ ಹೆಲಿಕಾಪ್ಟರ್ ಜೋಶಿಮಠದ ಹಾಥಿ ಪರ್ವತ ಪ್ರದೇಶದಲ್ಲಿ ನಾಪತ್ತೆಯಾಗಿದೆ. ಹೀಗಾಗಿ ಹೆಲಿಕಾಪ್ಟರ್ ಹೊರಟ ಸಮಯದ ಕುರಿತು ವರದಿಗಳಲ್ಲಿ ವ್ಯತ್ಯಾಸ ಕಂಡುಬಂದಿದೆ.

ರಕ್ಷಣಾ ಕಾರ್ಯಾಚರಣೆಗೆ ಮುಖ್ಯಮಂತ್ರಿ ಸೂಚನೆ

ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಗಂಭೀರವಾಗಿ ಗಾಯಗೊಂಡವರು ಪತ್ತೆಯಾದರೆ ಅವರನ್ನು ಹೆಲಿಕಾಪ್ಟರ್ ಮೂಲಕ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಸಾಗಿಸಲು ಸೂಚಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಹಿಮಪಾತದಿಂದ ಶೋಧ ಕಾರ್ಯಕ್ಕೆ ಅಡ್ಡಿ

ಜೋಶಿಮಠ ಸುತ್ತಮುತ್ತಲಿನ ಪರ್ವತ ಪ್ರದೇಶದಲ್ಲಿ ಹಿಮಪಾತವಾಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಎದುರಾಗುವ ಸಾಧ್ಯತೆಯಿದೆ. ಹೆಲಿಕಾಪ್ಟರ್ ಹಾಥಿ ಪರ್ವತ ಸಮೀಪ ಪತನಗೊಂಡಿರಬಹುದು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸೇನೆಯು ಚಮೋಲಿ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಸೇನೆ, ಜಿಲ್ಲಾಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಶೋಧ ಕಾರ್ಯಕ್ಕೆ ನಿಯೋಜಿಸಲಾಗಿದೆ.

More articles

Latest article

Most read