ಹೈಕೋರ್ಟ್ ವಕೀಲೆ ಚೈತ್ರಾ ಅನುಮಾನಾಸ್ಪದ ಸಾವು: ಡೆತ್ ನೋಟ್ ನಲ್ಲಿ ಏನಿದೆ?

ಬೆಂಗಳೂರು: ಕೆ.ಎ.ಎಸ್. ಅಧಿಕಾರಿಯ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲೆ ಚೈತ್ರ ಗೌಡ ಮೃತದೇಹ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾಯಬೇಕೆಂದು ಮೊದಲೇ ತೀರ್ಮಾನಿಸಿದ್ದ ಚೈತ್ರ ಗೌಡ ಮಾರ್ಚ್ 11 ರಂದೇ ಡೆತ್ ನೋಟ್ ಬರೆದಿಟ್ಟಿದ್ದರು. ʻʻನಾನು ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಖಿನ್ನತೆಯಿಂದ ಹೊರಬರಲು ಸಾಕಷ್ಟು ಪ್ರಯತ್ನಿಸಿದೆ. ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ನಮ್ಮ ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ. ನೀವು ಲೈಫ್ ಎಂಜಾಯ್ ಮಾಡಿʼʼ ಎಂದು ಅವರು ಪತಿಯನ್ನುದ್ದೇಶಿಸಿ ಡೆತ್ ನೋಟ್ ನಲ್ಲಿ ಬರೆದಿದ್ದರು.

ವೃತ್ತಿಯಲ್ಲಿ ಹೈಕೋರ್ಟ್ ವಕೀಲರಾಗಿದ್ದ ಚೈತ್ರಗೌಡ ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೃತ ಚೈತ್ರಗೌಡ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

More articles

Latest article

Most read