8ನೇ ಬಾರಿಗೆ ಇಂದೋರ್‌ ಗೆ ದೇಶದ ಮೊದಲ  ‘ಸ್ವಚ್ಛ ನಗರ’ಪ್ರಶಸ್ತಿ; ಮೈಸೂರಿಗೆ 3ನೇ ಸ್ಥಾನ

Most read

ನವದೆಹಲಿ: ಮಧ್ಯಪ್ರದೇಶದ ಇಂದೋರ್‌ ನಗರ ಸತತ ಎಂಟನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂಬ ಖ್ಯಾತಿಗೆ ಭಾಜನವಾಗಿದ್ದರೆ ಎರಡನೇ ಸ್ಥಾನದಲ್ಲಿ ಛತ್ತೀಸಗಢದ ಅಂಬಿಕಾಪುರ ಮತ್ತು ಕರ್ನಾಟಕದ ಮೈಸೂರು ಮೂರನೇ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 2024–25ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಿದೆ. ಉತ್ತಮ ಪ್ರದರ್ಶನ ನೀಡಿದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಛತ್ತೀಸಗಢ ಮತ್ತು ಕರ್ನಾಟಕ ನಂತರದ ಸ್ಥಾನಗಳಲ್ಲಿವೆ.

3 ಲಕ್ಷದಿಂದ 10 ಲಕ್ಷ ಜನಸಂಖ್ಯೆಯ ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಗುಜರಾತ್‌ನ ಅಹಮದಾಬಾದ್, ಛತ್ತೀಸಗಢದ ರಾಯಪುರ, ಮಹಾರಾಷ್ಟ್ರದ ನವಿ ಮುಂಬೈ, ಗುಜರಾತ್‌ನ ಸೂರತ್ ಸ್ಥಾನ ಪಡೆದಿವೆ.

ನವದೆಹಲಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಸ್ವಚ್ಛ ನಗರ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕೇಂದ್ರ ಸಚಿವ ಮನೋಹರ್ ಲಾಲ್ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More articles

Latest article