ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಮೂರು ದಿನಗಳಲ್ಲಿ ರೂ. 745.84 ಕೋಟಿ ಆದಾಯ ಸೇರ್ಪಡೆಯಾಗಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ 2025ರ ಕೊನೆಯಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಅದರಲ್ಲೂ ಇಂಡಿಯನ್ ಮೇಡ್ ಲಿಕ್ಕರ್ (IML) ಮತ್ತು ಬಿಯರ್ ಮಾರಾಟದಲ್ಲಿ ದಾಖಲೆ ಸೃಷ್ಟಿಯಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷದ ಕೊನೆಯ...