ವರ್ಷಕ್ಕೆ ಮೂರು ಕೋಟಿಯಷ್ಟು ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಮಿಳಿನಾಡಿನ ಪ್ರಮುಖ ಕೈಗಾರಿಕಾ ಕೇಂದ್ರವಾಗಿರುವ ಹೊಸೂರಿನಲ್ಲಿ 2,000 ಎಕರೆ ವಿಸ್ತಾರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಪ್ರಕಟಿಸಿದರು.
ವಿಧಾನಸಭೆಯ ನಿಯಮ 110ರ ಅಡಿಯಲ್ಲಿ ಘೋಷಣೆ ಮಾಡುವಾಗ, ಹೊಸೂರಿನಲ್ಲಿ ಹಲವು ದೊಡ್ಡ ದೊಡ್ಡ ಉತ್ಪಾದನ ಮತ್ತು ಕೈಗಾರಿಕೆ ಮತ್ತು ಕಂಪನಿಗಳಿದೆ. ಅದರ ಸಂಪರ್ಕವನ್ನು ಹೆಚ್ಚಿಸುವ ಅಗತ್ಯವಿದ್ದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೆಳಿದ್ದಾರೆ. ಇತ್ತೀಚಿಗೆ ಹೊಸೂರಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಹೆಚ್ಚಿನ ಹೂಡಿಕೆಗಳಾಗಿವೆ.
“ಹೊಸೂರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ, ಇದನ್ನು ಪ್ರಮುಖ ಆರ್ಥಿಕ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಹೊಸೂರಿನ ಹೊಸ ಮಾಸ್ಟರ್ ಪ್ಲಾನ್ ಮುಕ್ತಾಯದ ಹಂತದಲ್ಲಿದೆ. ಸಾಮಾಜಿಕ-ಆರ್ಥಿಕವನ್ನು ಹೆಚ್ಚಿಸಲು ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಅಭಿವೃದ್ಧಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಸ್ಟಾಲಿನ್ ಹೇಳಿದರು.
ಹೊಸ ವಿಮಾನ ನಿಲ್ದಾಣವು ತಮಿಳುನಾಡು ಮತ್ತು ಕರ್ನಾಟಕ ಎರಡರಲ್ಲೂ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ನಂತರ ಹೇಳಿಕೆಯಲ್ಲಿ ತಿಳಿಸಿದ್ದಾರೆ.