ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿ.ಕೆ. ಶಿವಕುಮಾರ್

ಮಹಿಳೆಯರಿಗೆ ಮಾಸಿಕ 2 ಸಾವಿರ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ,

ಚೆನ್ನೈ : ಕರ್ನಾಟಕದ ಮಾದರಿಯಲ್ಲಿ ತಮಿಳುನಾಡಿನಲ್ಲಿಯೂ ಸಹ ಹಲವು ಗ್ಯಾರಂಟಿ ಮಾದರಿಯ ಭರವಸೆಗಳನ್ನು ನೀಡಿದೆ. ಚೆನ್ನೈನ ತಮಿಳುನಾಡು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಮಹಿಳೆಯರಿಗೆ 2 ಸಾವಿರ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ, ಭೂ ರಹಿತ ರೈತರಿಗೆ ವಾರ್ಷಿಕ 6 ಸಾವಿರ ಸೇರಿದಂತೆ ತಮಿಳುನಾಡಿನ ಎಲ್ಲಾ ವರ್ಗದವರ ಹಿತ ಕಾಪಾಡುವ ಮಹತ್ತರ ಭರವಸೆಗಳನ್ನು ಒಳಗೊಂಡ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿವೆ.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಕಾರ್ತಿ ಚಿದಂಬಂರಂ ಹಾಗೂ ಅವರ ತಂಡ ತಮಿಳುನಾಡಿನ ಮೂಲೆ ಮೂಲೆ ಸಂಚರಿಸಿ, ಎಲ್ಲಾ ವರ್ಗದ ಜನರನ್ನು ಭೇಟಿ ಮಾಡಿ, ಜನರ ಭಾವನೆ ಅರಿತು ಈ ಪ್ರಣಾಳಿಕೆ ರೂಪಿಸಿದ್ದಾರೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿಯಾದರೆ, ಸಮಾಜ ಬಲಿಷ್ಠವಾಗುತ್ತದೆ. ಇದಕ್ಕಾಗಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ. ನೇರ ಹಣ ವರ್ಗಾವಣೆ ಮೂಲಕ ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ಹಣ ತಲುಪಿಸಲಾಗುವುದು’ ಎಂದು ತಿಳಿಸಿದರು.

ಆರೋಗ್ಯ ವಿಚಾರ, ಮೀನುಗಾರರ ಸಮಸ್ಯೆ, ಭೂ ದಾಖಲೆ ಹಂಚಿಕೆ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ರಾಜ್ಯದ ಜನರ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗಿದೆ. ನಿರುದ್ಯೋಗಿ ಯುವಕರಿಗಾಗಿ 3 ಲಕ್ಷ ಸರ್ಕಾರಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲಾಗುವುದು. ಹುದ್ದೆ ಖಾಲಿಯಾದ 300 ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಣಾಳಿಕೆಯ ಅಂಶಗಳನ್ನು ವಿವರಿಸಿದರು.

ತಮಿಳುನಾಡು ದೇಶದಲ್ಲೇ ವೈಶಿಷ್ಟ ರಾಜ್ಯವಾಗಿದೆ. ತನ್ನದೇ ಆದ ಇತಿಹಾಸವಿದೆ. ಇಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ನಾವು ಇಡೀ ದೇಶ ದಕ್ಷಿಣ ಭಾರತ ಅದರಲ್ಲೂ ತಮಿಳುನಾಡಿನ ದೇವಾಲಯಗಳತ್ತ ಆಕರ್ಷಿಸಲು ಕಾರ್ಯಕ್ರಮ ರೂಪಿಸಲಾಗುವುದು. ಪಿಂಚಣಿ ದರ ಏರಿಕೆ ಮಾಡಲಾಗಿದ್ದು, ಭೂರಹಿತ ರೈತರಿಗೆ ವಾರ್ಷಿಕ 6 ಸಾವಿರ ಹಣ ನೀಡಲಾಗುವುದು” ಎಂದರು.

“ಇಂದು ತಮಿಳುನಾಡಿನ ಕಾಂಗ್ರೆಸ್ ಸಮಿತಿಯು ದೂರದೃಷ್ಟಿಯ ದಾಖಲೆಯನ್ನು ಬಿಡುಗಡೆ ಮಾಡುತ್ತಿದೆ. ಈ ಪ್ರಣಾಳಿಕೆ ತಮಿಳುನಾಡಿನ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬಲಿದೆ. ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಜನರ ಬಗ್ಗೆ ಕಾಳಜಿ ವಹಿಸುತ್ತದೆ. ಮಹಿಳೆಯರು, ಯುವಕರು, ರೈತರು ಹಾಗೂ ಶೋಷಿತ ವರ್ಗದವರನ್ನು ರಕ್ಷಣೆ ಮಾಡುತ್ತದೆ. ನಾವು ಇಲ್ಲಿ ಕಳೆದ ಹತ್ತು ವರ್ಷಗಳಿಂದ ಮೈತ್ರಿ ಸರ್ಕಾರದ ಭಾಗವಾಗಿ ರಾಜ್ಯವನ್ನು ಬಲಿಷ್ಠಗೊಳಿಸಲು ಶ್ರಮಿಸಿದ್ದೇವೆ. ಮುಂದಿನ ಐದು ವರ್ಷಗಳ ಕಾಲ ಈ ರಾಜ್ಯದ ಸೇವೆ ಮಾಡುವ ವಿಶ್ವಾಸವಿದೆ. ನಾವು ಜಾತ್ಯಾತೀತ ತತ್ವದ ಮೇಲೆ ಒಂದಾಗಿ ದೇಶವನ್ನು ಮುನ್ನಡೆಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದರು. 

More articles

Latest article

Most read