ಮೇಕೆದಾಟು ಯೋಜನಾ ಸ್ಥಳಕ್ಕೆ ತಮಿಳುನಾಡು ನಿಯೋಗ ಭೇಟಿ ನೀಡಲಿ : ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್ 29 :  ಮೇಕೆದಾಟು ಯೋಜನಾ ಸ್ಥಳವನ್ನು ಪರಿಶೀಲಿಸಲು ತಮಿಳುನಾಡು ಸರ್ಕಾರ ನಿಯೋಗ ಕಳುಹಿಸಲಿ ಎಂದು ಹಾಗೂ  ಮೇಕೆದಾಟು ಸೇರಿದಂತೆ ರಾಜ್ಯದ ಜಲ ಯೋಜನೆಗಳಿಗೆ ಅನುಮೋದನೆ ಮತ್ತು ಕೇಂದ್ರದ ನೆರವು ನೀಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 

ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇಕೆದಾಟು ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಾಗುತ್ತದೆ. ನೀರಾವರಿಗೆ ಬಳಸುವುದಿಲ್ಲ ಎಂಬ ಕರ್ನಾಟಕದ ನಿಲುವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಂಡಿದೆ. ₹16,745 ಕೋಟಿ ವೆಚ್ಚದ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ಕರ್ನಾಟಕ ಸರ್ಕಾರ ಹೊಸ ಡಿಪಿಆರ್ ಸಲ್ಲಿಸಿದೆ. ಇದರ ಪರಿಶೀಲನೆ ಹಾಗೂ ಅಗತ್ಯ ಅನುಮೋದನೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರೊಂದಿಗೆ ಮುಖಾಮುಖಿ ಚರ್ಚೆ ನಡೆಸಲು ಆಹ್ವಾನ ನೀಡಲಾಗುವುದು, ತಮಿಳುನಾಡು ಸರ್ಕಾರವೂ ನಿಯೋಗ ಕಳುಹಿಸಿ ಮೇಕೆದಾಟು ಯೋಜನಾ ಸ್ಥಳವನ್ನು ಪರಿಶೀಲಿಸಲಿ. ನಿಯೋಗಕ್ಕೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಹೇಳಿದರು. .

ಆಗಸ್ಟ್ 13ರಂದು ಸಲ್ಲಿಸಿರುವ ಅನುಸರಣೆ ವರದಿಯೊಂದಿಗೆ ಮೇಕೆದಾಟು ಡಿಪಿಆರ್ ಪರಿಶೀಲನೆಗೆ ಆದ್ಯತೆ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಸಿ.ಆರ್. ಪಾಟೀಲ್ ಅವರಿಗೆ ಸಲ್ಲಿಸಿದ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ಕೋರಿದ್ದಾರೆ. ಕೃಷ್ಣಾ ಜಲ ವಿವಾದಗಳ ನ್ಯಾಯಮಂಡಳಿ-2ಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರದಲ್ಲೂ ಕೇಂದ್ರದ ಮಧ್ಯಸ್ಥಿಕೆ ಕೋರಿದ್ದಾರೆ.

ಮಹಾದಾಯಿ ವಿಚಾರದಲ್ಲೂ ಕರ್ನಾಟಕ ಮತ್ತು ಗೋವಾ ಮುಖ್ಯಮಂತ್ರಿಗಳ ಜಂಟಿ ಸಭೆ ನಡೆಸುವುದಾಗಿ ಸಿ.ಆರ್. ಪಾಟೀಲ್ ಭರವಸೆ ನೀಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಮೇಲ್ದಂಡೆ ಕೃಷ್ಣಾ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸುವಂತೆಯೂ ಮನವಿ ಮಾಡಲಾಗಿದೆ.

More articles

Latest article

Most read