22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲ ಸೀತಾರಾಮನ್ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ’22 ಜನವರಿ 2024ರಂದು ಅಯ್ಯೋಧ್ಯೆಯ ರಾಮಮಂದಿರ ನೇರಪ್ರಸಾರ ವಿಕ್ಷಣೆಗೆ ತಮಿಳುನಾಡು ಸರ್ಕಾರ ನಿಷೇಧಿಸಿದೆ. ತಮಿಳುನಾಡಿನಲ್ಲಿ 200 ಕ್ಕೂ ಹೆಚ್ಚು ಶ್ರೀರಾಮನ ದೇವಾಲಯಗಳಿವೆ. HR&CE (ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ) ನಿರ್ವಾಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ, ಪ್ರಸಾದ ವಿನಿಯೋಗ ಯಾವುದನ್ನು ತಮಿಳುನಾಡು ಸರ್ಕಾರ ಅನುಮತಿಸಿಲ್ಲ’ ಎಂದು ಹೇಳಿದ್ದಾರೆ.
ಇನ್ನೂ ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ಪೆಂಡಾಲ್ಗಳನ್ನು ಕಿತ್ತುಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕಿತ್ತಿದ್ದಾರೆ ಎಂದು ಆರೋಪ ಮಾಡಿದರು.