ತಮಿಳುನಾಡು: ಭೀಕರ ಅಫಘಾತಕ್ಕೆ ಐವರು ಸಾವು

Most read

ಕರೂರ್‌ : ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಸಮೀಪ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಕ್ಕಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು,  ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಮೃತದೇಹಗಳನ್ನು ಹೊರತರಲು ಹಾನಿಗೊಳಗಾದ ಕಾರನ್ನು ಕತ್ತರಿಸಿ ಹೊರತೆಗೆಯಬೇಕಾಯಿತು. ಪೊಲೀಸರ ಪ್ರಕಾರ, ಕುಳಿತ್ತಲೈ ಬಳಿಯ ಕರೂರ್-ತಿರುಚಿರಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕರೂರ್‌ಗೆ ಹೋಗುತ್ತಿದ್ದ ಕಾರು ಮತ್ತು ಅರಂಥಂಗಿಯಿಂದ ತಿರುಪ್ಪೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತರು ಕೊಯಮತ್ತೂರಿನ ಕುನಿಯಮುತ್ತೂರ್ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article