ಕಲ್ಲು ಗಣಿಗಾರಿಕೆ; ಬಂಡೆಗಳು ಕುಸಿದು ಐವರ ದುರ್ಮರಣ

ಶಿವಗಂಗಾ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಂದು ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿಯಲ್ಲಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸಿಂಗಂಪುನಾರಿಯ ಮೆಹವರ್ಣಮ್ ಎಂಬುವರ ಒಡೆತನದ ಕ್ವಾರಿಯಲ್ಲಿ ಘಟನೆ ಸಂಭವಿಸಿದ್ದು, ಅಲ್ಲಿ ಆರು ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಕಲ್ಲುಗಳನ್ನು ತೆರವುಗೊಳಿಸಿದ ನಂತರ ಮೂವರ ಶವಗಳನ್ನು ಹೊರತೆಗೆದಿದ್ದಾರೆ. ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿಯಿಡೀ ಬಿದ್ದ ಮಳೆ ಮತ್ತು ಕಲ್ಲು ಸೀಳಲು ಬಳಸಿದ ಸ್ಫೋಟಕಗಳೇ ಕುಸಿತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read