ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ತುಂಡಾದ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

More articles

Latest article

Most read