ಕೆ.ಆರ್.ಪುರಂನಲ್ಲಿ ಭೀಕರ ಅಪಘಾತ : ಮೂವರು ಸಾವು

ಬೆಂಗಳೂರು: ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ಪುರಂನ  ಮೇಡಹಳ್ಳಿ ಮೇಲ್ ಸೇತುವೆ ಮೇಲೆ ನಡೆದಿದೆ.

ವೈಟ್ ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್, ಶ್ರೀನಿವಾಸ್ ಎಂದು ಮೃತರನ್ನು ಗುರುತಿಸಲಾಗಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬಂದಿದ್ದ ಕ್ಯಾಂಟರ್ ವಾಹನ ಮೇಲ್ ಸೇತುವೆ ಮೇಲೆ ಪಂಚರ್ ಆಗಿತ್ತು. ಚಾಲಕ ಟೈರ್ ಬದಲಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಟಾಟಾ ಏಸ್ ಡಿಕ್ಕಿಯಾಗಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ದೇಹಗಳು ಛಿದ್ರವಾಗಿವೆ
ಸ್ಥಳಕ್ಕೆ ಕೆ.ಆರ್. ಪುರಂ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೇಲ್ನೋಟಕ್ಕೆ ಈಚರ್ ವಾಹನ ಚಾಲಕನ ನಿರ್ಲಕ್ಷ್ಯ ಕಂಡು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಉತ್ತರ ವಿಭಾಗ ಡಿಸಿಪಿ ನೇಮಗೌಡ ಹೇಳಿದ್ದಾರೆ.

More articles

Latest article

Most read