ರಷ್ಯಾದಲ್ಲಿ ಉಗ್ರರ ಅಟ್ಟಹಾಸ: 60 ಜನರ ಬಲಿ, 100ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ರಾಷ್ಟ್ರದಲ್ಲಿ ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸುಮಾರು 60 ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ರಷ್ಯಾದ ಮಾಸ್ಕೋದಲ್ಲಿ ನಡೆಯುತ್ತಿದ್ದ ಅತಿ ದೊಡ್ಡ ಸಂಗೀತ ಕಾರ್ಯಕ್ರಮದ ಕಛೇರಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಇಡೀ ಹಾಲ್‌ಗೆ ಬೆಂಕಿ ಹಚ್ಚಿದ್ದಾರೆ. ದಾಳಿಯಲ್ಲಿ ಕನಿಷ್ಠ 60 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

6,200 ಜನರು ಕೂರಬಹುದಾದ ದೊಡ್ಡ ಸಂಗೀತ ಹಾಲ್‌ ಆದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಹಾಲ್‌ಗೆ ನುಗ್ಗಿದ ನಾಲ್ವರು ಬಂದೂಕುದಾರಿಗಳು ಗುಂಡಿನ ಸುರಿಮಳೆಗೈದು ಬೆಂಕಿ ಹಚ್ಚಿದ್ದಾರೆ.

More articles

Latest article

Most read