ಕಾರಿನ ಲಾಕರ್‌ ತೆರೆದು ಕಳವು ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕಾರಿನ ಲಾಕರ್‌ ತೆರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈಜಿಪುರದ ಸೈಯದ್‌ ಮಹಮದ್‌ ವಾಸಿಫ್‌ ಬಂದಿತ ಆರೋಪಿಯಾಗಿದ್ದು ಈತನಿಂದ 2 ಲಕ್ಷ ರೂ. ನಗದು ಮತ್ತು
ಒಂದು ಕಾರನ್ನು ಜಪ್ತಿ ಮಾಡಿದ್ದಾರೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಪತಿಯನ್ನು ಬಾಣಸವಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ಕಾರನ್ನು ನಿಲುಗಡೆ ಮಾಡಿ ಆಸ್ಪತ್ರೆಗೆ ಹೋಗಿದ್ದರು. ಕಾರಿನಲ್ಲಿ ಹಣ ಮತ್ತು ಚಿನ್ನಾಭರಣಗಳನ್ನಿಟ್ಟಿದ್ದರು. ಆರೋಪಿಯು ಸ್ಕೇಲ್‌ ಬಳಸಿಕೊಂಡು ಕಳವು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಳವು ಸಂಬಂಧ ಮಹಿಳೆಯು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಳ್ಳತನ ಮಾಡಿದ್ದಾಗಿ ಆರೋಪಿ ತಿಳಿಸಿದ್ದಾನೆ.

More articles

Latest article

Most read