ದಲಿತ ನಾಯಕ ಸತೀಶ್‌ ಜಾರಕಿಹೊಳಿಗೆ ಬೆಳವಣಿಗೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ದಾಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ದೇಶದಲ್ಲಿ ವ್ಯಾಪಾರ-ವಹಿವಾಟು ಮಾಡಬಾರದಾ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ವಾ? ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ? ಸತೀಶ್ ಜಾರಕಿಹೊಳಿ ಒಬ್ಬ ಹಿರಿಯ ಮಂತ್ರಿ ಹಾಗೂ ಉದ್ಯಮಿ. ಯಾವುದೇ ಮುಚ್ಚುಮರೆ ಇಲ್ಲದೆ ಸಮಾಜಸೇವೆ ಮಾಡುತ್ತಿದ್ದಾರೆ. ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ, ಯಾರೂ ಗಾಬರಿಯಾಗಬೇಕಿಲ್ಲ ಎಂದರು. 

ನಾಳೆ ನಮ್ಮ ಸರ್ಕಾರಕ್ಕೆ 100 ದಿನ ತುಂಬುತ್ತಿದೆ. ಇದನ್ನು ಹಳ್ಳ ಹಿಡಿಸಲು ಮತ್ತು ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಇಂತಹ ತಂತ್ರ ರೂಪಿಸಿದೆ. ಈ ಹಿಂದೆ ನಾಗೇಂದ್ರ ಮೇಲೆಯೂ ದಾಳಿ ಮಾಡಿಸಿದ್ದರು. ಈಗ ಪ್ರಿಯಾಂಕ್ ಖರ್ಗೆ ಮತ್ತು ಕೆಪಿಎಸ್‌ಸಿ ವಿಚಾರದಲ್ಲೂ ವಿನಾಕಾರಣ ಹಿಂದೆ ಬಿದ್ದಿದ್ದಾರೆ. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡುತ್ತಿಲ್ಲ? ರಾಹುಲ್ ಗಾಂಧಿ ಅವರ ಮೇಲೆ ಎಫ್‌ಐಆರ್ ದಾಖಲಿಸುತ್ತಾರೆ, ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡುತ್ತಾರೆ. ನಾವು ಯಾವ ಕಾಲದಲ್ಲಿದ್ದೇವೆ? ಇಂತಹ ಷಡ್ಯಂತ್ರಗಳಿಗೆ ನಾವು ಹೆದರುವುದಿಲ್ಲ, ನಮ್ಮ ಶಾಸಕರಿಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದರು.

More articles

Latest article

Most read