Thursday, September 19, 2024

ವಿಧಾನ ಮಂಡಲ ಒಪ್ಪಿಗೆ ನೀಡಿ ಕಳಿಸಿದ 11 ಮಸೂದೆಗಳನ್ನು ವಾಪಸ್ ಕಳಿಸಿದ ರಾಜ್ಯಪಾಲರು!

Most read

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಭವಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹಗ್ಗಜಗ್ಗಟ ಶುರುವಾಗಿದೆ. ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರ ಹಿಂತಿರುಗಿಸಿದ್ದಾರೆ. ಇದರಿಂದ ಮಸೂದೆಗಳು ಪಾಸಾಗದೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

ಜನವರಿಯಿಂದ ಇಲ್ಲಿಯವರೆಗೆ ರಾಜ್ಯಪಾಲರು ಒಟ್ಟು 11 ಮಸೂದೆಗಳನ್ನು ಹೆಚ್ಚಿನ ಮಾಹಿತಿ ಕೋರಿ ವಾಪಸ್​ ಕಳುಹಿಸಿದ್ದಾರೆ. ಇದು ಸರ್ಕಾರ ತಲೆನೋವಾಗಿದ್ದರೂ, ರಾಜ್ಯಪಾಲರಿಗೆ ಸ್ಪಷ್ಟನೆ ನೀಡಬೇಕಾಗುತ್ತದೆ.

ವಾಪಸ್​ ಕಳುಹಿಸಲಾದ ಮಸೂದೆಗಳು

ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ ತಡೆ) ವಿಧೇಯಕ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ)

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ

ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ

ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ

ಗದಗ ಬೆಟಗೇರಿ ವ್ಯಾಪರ, ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕ

More articles

Latest article