ಮಹೇಶ್‌ ಶೆಟ್ಟಿ ತಿಮರೋಡಿ ಅವರ ಗಡೀಪಾರು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿದ ವಿಭಾಗಧಿಕಾರಿ ಆದೇಶವನ್ನು ಪ್ರಶ್ನಿಸಿ  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಿಮರೋಡಿ ಅವರ ಪರ ವಕೀಲರು ಹೈಕೋರ್ಟ್ ಗೆ  ಮೇಲ್ಮನವಿ  ಸಲ್ಲಿಸಿದ್ದರು. ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ವಜಾಗೊಳಿಸಿ ಆದೇಶಿಸಿದೆ.

ಪುತ್ತೂರು ವಿಭಾಗಾಧಿಕಾರಿ (ಎಸಿ) ಅವರು ಮೂರನೇ ಬಾರಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶವನ್ನು ಪ್ರಶ್ನೆ ಮಾಡಿ ತಿಮರೋಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ನಿಯಮಾವಳಿಗಳ ಪ್ರಕಾರ ಸರಕಾರದ ಮುಂದೆಯೇ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ಸೂಚಿಸಿತು.

ಮೊದಲಿಗೆ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ ಸುನೀಲ್ ದತ್ ಯಾದವ್ ಮತ್ತು ಎಸ್ ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ನಡೆಸಿತ್ತು. ಆಗ ತಿಮರೋಡಿ ಅವರ ಪರ ವಕೀಲರು ಈ ಪ್ರಕರಣವು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದ್ದು, ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ ಎಂದು ವಾದ ಮಾಡಿ ತಡೆ ಕೋರಿದ್ದರು.

ಆದರೆ ಸರಕಾರದ ಪರ ವಾರ ಮಂಡಿಸಿದ ಅಡ್ವೊಕೇಟ್‌ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ಆಕ್ಷೇಪದ ಬಳಿಕ, ತಾಂತ್ರಿಕ ಕಾರಣ ನೀಡಿ ರಜಾಕಾಲೀನ ಪೀಠ ತಡೆ ನೀಡಲು ನಿರಾಕರಿಸಿತ್ತು. ಅಂತಿಮ ಹಂತವಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠವು ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿತು.

ವಜಾ ಮಾಡುವ ಮೊದಲು ತಿಮರೋಡಿ ಅವರ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಮುಖ್ಯ ನ್ಯಾಯಮೂರ್ತಿ ಗಳು ಕ್ರಿಮಿನಲ್ ಮೊಕದ್ದಮೆ ಯಲ್ಲಿ ಖುಲಾಸೆ ಯಾಗಲು ಸಾಕ್ಷಿಗಳ ನ್ನು ಬೆದರಿಸಿ ಸಾಕ್ಷಿ ಹೇಳದಂತೆ ಮಾಡಿರುವುದು ಕಾರಣ ಇರಬಹುದು ಎಂದು ವಿಶ್ಲೇಷಸಿದರು.
ಮಹೇಶ್ ತಿಮರೋಡಿ ಅವರ ಮೇಲೆ 26 ಕ್ರಿಮಿನಲ್ ಪ್ರಕರಣ ನ್ಯಾಯಾಲಯದ ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ ಎಂದು ಅಡ್ವೋಕೇಟ್ ಜನರಲ್ ತಿಳಿಸಿದರು.

More articles

Latest article

Most read