ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆಗಳನ್ನು ಸಚಿವರು ಕೂಡಲೇ ನಿಲ್ಲಿಸಬೇಕು : ಮಂಜುನಾಥ ಭಂಡಾರಿ

Most read

ಗ್ಯಾರಂಟಿ ಯೋಜನೆಗಳನ್ನು ಇಂದಿನ ಸಚಿವರನ್ನು ಕೇಳಿ ಮಾಡಿಲ್ಲ. ಇವುಗಳನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸುರ್ಜೇವಾಲಾ ರವರು, ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ, ಇಂದಿನ ಸಿಎಂ ಸಿದ್ದರಾಮಯ್ಯರವರು, ಅಂದಿನ ಕೆಪಿಸಿಸಿ ಅಧ್ಯಕ್ಷರು ಹಾಗೂ ಇಂದಿನ ಡಿಸಿಎಂ ಡಿಕೆ ಶಿವಕುಮಾರ್ ಅವರೆಲ್ಲರೂ ಸೇರಿ ಕರೋನಾದಿಂದ ತತ್ತರಿಸಿದ ಜನರ ಬದುಕಿಗೆ ಆಸರೆ ಆಗಬೇಕು, ಅವರ ಬದುಕಿಗೆ ಬೆಳಕಾಗಬೇಕು ಎಂಬ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು.

ಅಲ್ಲದೆ, ಗ್ಯಾರಂಟಿಗಳನ್ನು ಚುನಾವಣೆಯ ಮತ ಗಳಿಕೆಗಾಗಿ ಘೋಷಣೆ ಮಾಡಿದ್ದಲ್ಲ. ಶ್ರೀಸಾಮಾನ್ಯರನ್ನು ಮಹಿಳೆಯರನ್ನು ಆರ್ಥಿಕವಾಗಿ ಶಕ್ತಿಯುತರಾಗಿ ಸಬಲರನ್ನಾಗಿ ಮಾಡಬೇಕೆಂಬ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವು ಈ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಜಾರಿಗೆ ತಂದಿದೆ.

ಇಂದು ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ರಾಜ್ಯ ಸರ್ಕಾರ ಸಹ ಈ ಬಜೆಟ್ ನಲ್ಲಿ 58,000 ಕೋಟಿ ರೂಪಾಯಿಯನ್ನು ಇದಕ್ಕೋಸ್ಕರ ತೆಗೆದಿರಿಸಿದೆ. ಇದರ ಬಗ್ಗೆ ಕೆಲವರು ಅನಾವಶ್ಯಕವಾಗಿ ಮಾಧ್ಯಮಗಳಿಗೆ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದನ್ನು ಪಕ್ಷದ ಚೌಕಟ್ಟಿನಲ್ಲಿ ಸರ್ಕಾರ ತೀರ್ಮಾನ ಮಾಡುತ್ತದೆ. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ಕೊಡಬೇಕು .

More articles

Latest article