Thursday, July 25, 2024

ಪ್ರಧಾನಿ ಸೋಲಿನ ಭೀತಿಯಲ್ಲಿ ಹತಾಶರಾಗಿದ್ದಾರೆ, ಮೇಲಕ್ಕೆ ಏರಿದವರು ಕೆಳಕ್ಕೆ ಇಳಿಯಲೇಬೇಕು: ಸಿದ್ಧರಾಮಯ್ಯ

Most read

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸೋಲಿನ ಭೀತಿಯಲ್ಲಿ ಹತಾಶರಾಗಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಯತ್ನ ನಡೆಸುತ್ತಿದ್ದಾರೆ. ಮೇಲಕ್ಕೆ ಏರಿದವರು ಕೆಳಕ್ಕೆ ಇಳಿಯಬೇಕಲ್ಲವೇ? ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ʻಪ್ರತಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಯತ್ನಿಸುತ್ತಿವೆʼ ಎಂಬ ಮೋದಿ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.

ಯಾರೂ ಯಾರನ್ನೂ ಸಮಾಧಿ ಮಾಡಲು ಸಾಧ್ಯವಿಲ್ಲ. ನಮ್ಮ ಹೋರಾಟವೇನಿದ್ದರೂ ರಾಜಕೀಯವಾದದ್ದು, ವೈಯಕ್ತಿಕವಲ್ಲ. ನರೇಂದ್ರ ಮೋದಿಯವರನ್ನು ನಾವು ರಾಜಕೀಯವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದರು.

ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಿಂದ ಬಡವರ ಪರವಾಗಿ ಯಾವುದೇ ಕೆಲಸ ಮಾಡಲಿಲ್ಲ. ಅವರು ಈಗಾಗಲೇ ಸುಳ್ಳಿನ ಸರದಾರ ಎಂದು ಹೆಸರಾಗಿದ್ದಾರೆ. ಹೀಗಾಗಿ ಅವರು ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಯತ್ನ ನಡೆಸುತ್ತಿದ್ದಾರೆ. ಆದರೆ ಇದು ಫಲಪ್ರದವಾಗುವುದಿಲ್ಲ. ನರೇಂದ್ರ ಮೋದಿ ಸುಳ್ಳುಗಳನ್ನು ಹೇಳುತ್ತಾರೆ ಎಂಬುದು ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.

More articles

Latest article