ಗೆದ್ದು ಬೀಗಿದ ʼಕೈʼ ಅಭ್ಯರ್ಥಿ ಸಮರ್ಥ್‌ ಶಾಮನೂರು.

ದಾವಣಗೆರಿ ಏ.04 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದೆ. ಯುವ ನಾಯಕ ಸಮರ್ಥ್‌ ಶಾಮನೂರು  ಅವರು ತಮ್ಮ ಪ್ರತಿಸ್ಪರ್ಧಿ, ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ‘ಕೈ’ ಭದ್ರಪಡಿಸಿದ್ದಾರೆ.

ಚುನಾವಣಾ ಕಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಈ ಪೈಪೋಟಿಯಲ್ಲಿ, ಮತ ಎಣಿಕೆಯ ಆರಂಭದಿಂದಲೂ ಸಮರ್ಥ್‌ ಶಾಮನೂರು ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ ಬಿಜೆಪಿಯ ಅಭ್ಯರ್ಥಿಯನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಆಡಳಿತವನ್ನು ಮುಂದುವರಿಸಿದೆ.

ಸದ್ಯ ಮತ ಎಣಿಕೆ ಪೂರ್ಣಗೊಂಡಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದು, ಸಮರ್ಥ್‌ ಶಾಮನೂರು ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುತ್ತಿದ್ದಾರೆ.

More articles

Latest article

Most read