ಮೈಸೂರು: ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 11:50 ರಿಂದ 12:13 ರ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಲಿದ್ದಾರೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವಾರು ಗಣ್ಯರು ಹಾಗೂ ಮಠಾಧೀಶರು ಭಾಗಿಯಾಗಲಿದ್ದಾರೆ.

