ರಾಜ್ಯದ ಜಲಾಶಯಗಳು ಬಹುತೇಕ ಭರ್ತಿ, ನದಿ‌ ತೀರಗಳಲ್ಲಿ ಪ್ರವಾಹ ಭೀತಿ

Most read

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಭಾರೀ ಪ್ರಮಾಣದ ಮುಂಗಾರು ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.

ಕೆಆರ್ ಎಸ್ ಜಲಾಶಯದ ಗರಿಷ್ಠ ಮಟ್ಟ 124 ಅಡಿಗಳಾಗಿದ್ದು, ಈಗ ನೀರಿನ ಮಟ್ಟವೂ 124 ಅಡಿಗೆ ಏರಿಕೆಯಾಗಿದೆ.

ತುಂಗಭದ್ರಾ ಜಲಾಶಯ ಭರ್ತಿಯಾಗಲು 2.50 ಅಡಿಗಳಷ್ಟೆ ಬಾಕಿ ಇದೆ. ಕಳೆದ ಕೆಲವು ದಿನಗಳಿಂದ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಕಾಣಿಸಿಕೊಂಡಿದೆ. ತುಂಗಭದ್ರಾ ಜಲಾಶಯದ ಗರಿಷ್ಠ ಮಟ್ಟ -1633 ಅಡಿಯಾಗಿದ್ದು ಇಂದಿನ ಮಟ್ಟ -1630.63 ಅಡಿ. ತುಂಗಭದ್ರಾ ನದಿಯಿಂದ 14738 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು, ಒಳಹರಿವಿನ ಪ್ರಮಾಣ 88831 ಕ್ಯೂಸೆಕ್ ಆಗಿದೆ.

ಕಬಿನಿ, ಹೇಮಾವತಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ನದಿಗಳ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಹಾರಂಗಿ, ಘಟಪ್ರಭಾ, ತುಂಗಭದ್ರಾ, ಆಲಮಟ್ಟಿ, ಭದ್ರಾ ಜಲಾಶಯಗಳು ಕೆಲವೇ ದಿನಗಳಲ್ಲಿ ಭರ್ತಿಯಾಗುವ ನಿರೀಕ್ಷೆಯಿದೆ.

More articles

Latest article