ಅಗತ್ಯ ವಸ್ತುಗಳ ಸಂಗ್ರಹ ಇದೆ: ಆತಂಕ ಬೇಡ; ಕಣಿವೆ ರಾಜ್ಯದ ಜನರಿಗೆ ಸರ್ಕಾರ ಭರವಸೆ

Most read

ಜಮ್ಮು: ಕೇಂದ್ರಾಡಳಿತ ಪ್ರದೇಶದಲ್ಲಿ ಆಹಾರ, ದವಸ ಧಾನ್ಯ, ತೈಲ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ಸರಕುಗಳ ಕೊರತೆ ಉಂಟಾಗಿಲ್ಲ. ಸಾಕಷ್ಟು ದಾಸ್ತಾನು ಇದೆ. ಜಮ್ಮು ಮತ್ತು ಕಾಶ್ಮೀರದ ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಆಹಾರ ಸಚಿವ ಸತೀಶ್ ಶರ್ಮಾ ಅವರು ಜನರಿಗೆ ಭರವಸೆ ನೀಡಿದ್ದಾರೆ.

ಅಗತ್ಯ ವಸ್ತುಗಳ ಸರಬರಾಜಿಗೆ ಸೂಕ್ತ ಮತ್ತು ಸಮರ್ಪಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲ ವಿತರಣಾ ಕೇಂದ್ರಗಳಲ್ಲಿ ಅಗತ್ಯ ವಸ್ತುಗಳ ದಾಸ್ತಾನಿದೆ. ಅಧಿಕಾರಿಗಳು ಪರಿಸ್ಥಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು, ಜನಸಾಮಾನ್ಯರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕೇಂದ್ರಾಡಳಿತ ಪ್ರದೇಶದಲ್ಲಿ ಸಂಚರಿಸುವವರಿಗೆ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿಲ್ಲ. ಪ್ರಯಾಣಿಕರಿಗೆ ಹೆಚ್ಚಿನ ದರ ವಿಧಿಸುವ ಸಾರಿಗೆ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈ ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಒಗ್ಗಟ್ಟಿನಿಂದ ಇರಬೇಕು. ಶಾಂತ ರೀತಿಯಿಂದ ವರ್ತಿಸಬೇಕು. ಜನರು ವದಂತಿಗಳನ್ನು ನಂಬಬಾರದು ಸರ್ಕಾರದ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಅವರು ಮನವಿ ಮಾಡಿದ್ದಾರೆ.

More articles

Latest article