ಹಿಂದಿ ಭಾಷೆ ವಿಚಾರದ ಮನಸ್ಥಿತಿಯಲ್ಲಿ ಬದಲಾವಣೆಯ ಅಗತ್ಯವಿದೆ ; ತಮಿಳುನಾಡಿಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ : ರಾಜ್ಯದ ಭೂಪ್ರದೇಶದಿಂದ ಹಿಂದಿ ಭಾಷೆಯನ್ನು ಹೊರಗಿಡಲು ಸಾಧ್ಯವಿಲ್ಲ,  ಮನಸ್ಥಿತಿಯಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಹೇಳಿದೆ.

ತಮಿಳುನಾಡಿನಲ್ಲಿ ನವೋದಯ ಶಾಲೆಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎ.ಜಿ.ಮಸಿಹ್ ಅವರ ಪೀಠವು ಈ ಅಭಿಪ್ರಾಯಪಟ್ಟಿದೆ.

ಒಂದೇ ಒಂದು ನವೋದಯ ಶಾಲೆಯನ್ನು ಹೊಂದಿರದ ಏಕೈಕ ರಾಜ್ಯ ತಮಿಳುನಾಡು ಆಗಿದೆ. ಈ ಶಾಲೆಗಳು ಹಿಂದಿ ಭಾಷೆಯನ್ನು ಹೇರುವ ಪ್ರಯತ್ನವಾಗಿವೆ ಎಂಬ ಆತಂಕವೇ ಈ ವಿರೋಧಕ್ಕೆ ಮೂಲ ಕಾರಣವಾಗಿದೆ.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಭೂಮಿಯನ್ನು ಗುರುತಿಸುವ ಕುರಿತಾದ ತನ್ನ ಮಧ್ಯಂತರ ಆದೇಶವನ್ನು ಹಿಂಪಡೆಯುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಪ್ರಸ್ತಾವಿತ ನವೋದಯ ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಲಿಸಲಾಗುವುದರಿಂದ, ಅದಕ್ಕೆ ತಮಿಳುನಾಡು ಸರ್ಕಾರ ವ್ಯಕ್ತಪಡಿಸಿರುವ ವಿರೋಧಕ್ಕೆ ಈ ವಿಷಯವು ಸಂಬಂಧಿಸಿದೆ. ಮೂರು ತಿಂಗಳ ಒಳಗಾಗಿ ಭೂಮಿಯನ್ನು ಗುರುತಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ತಮಿಳುನಾಡಿನ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಜೈದೀಪ್ ಗುಪ್ತಾ, ನವೋದಯ ನೀತಿಯು ರಾಜ್ಯದ ಭಾಷಾ ನೀತಿಗೆ ವಿರುದ್ಧವಾಗಿದೆ ಮತ್ತು ಇದು ತಮಿಳು ಭಾಷೆಗಿಂತ ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತಾಗಬಹುದು ಎಂದು ಹೇಳಿದರು. ಆದರೆ, ಕೇಂದ್ರ ಸರ್ಕಾರದ ನೀತಿಯನ್ನು ತಮಿಳುನಾಡು  ನಿರಾಕರಿಸಲು ಸಾಧ್ಯವಿಲ್ಲ. ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು  ಎಂದು ನ್ಯಾಯಮೂರ್ತಿ ನಾಗರತ್ನ ಅವರು ಅಭಿಪ್ರಾಯಪಟ್ಟರು.

ಈ ನೀತಿಯು ಐಚ್ಛಿಕವಾಗಿದ್ದು, ಸರ್ಕಾರಿ ನೀತಿಯನ್ನು ಜಾರಿಗೆ ತರುವಂತೆ ನ್ಯಾಯಾಲಯಗಳು ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ, ಸುಪ್ರೀಂ ಕೋರ್ಟ್ ಸಂವಾದ ಮತ್ತು ಸಹಕಾರಿ ಒಕ್ಕೂಟ ವ್ಯವಸ್ಥೆಯ ಅಗತ್ಯವನ್ನು ಒತ್ತಿಹೇಳಿತು.

 ಅಂತಿಮವಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯಡಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 14 ಕ್ಕೆ ನಿಗದಿಪಡಿಸಿದೆ.  

More articles

Latest article

Most read