ಬೆಂಗಳೂರು: ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಮುಖ ನಿರ್ವಹಣಾ ಕಾಮಗಾರಿ ಕೈಗೊಳ್ಳಲಗುತ್ತಿದೆ. ಆದ್ದರಿಂದ ದಿನಾಂಕ ಮಾರ್ಚ್ 5 ರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಮತ್ತು ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಎಲಿವೇಟೆಡ್ ಫ್ಲೈ ಓವರ್ ನ ಎರಡೂ ಕಡೆಗಳಲ್ಲಿ ರಾತ್ರಿ 11 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆದರೆ ಹಗಲಿನ ವೇಳೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಸ್ತೆಯು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರದಿರುತ್ತದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಇನ್ನು ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಾಕಷ್ಟು ಸರಣಿ ಅಪಘಾತಗಳು ಸಂಭವಿಸಿವೆ. ಅಲ್ಲದೇ ಸಾಕಷ್ಟು ಭಾರಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತಿತ್ತು. ಹೀಗಾಗಿ ಫ್ಲೈಓವರ್ ಮೇಲೆ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.