ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರಿಗೆ ಬೆದರಿಕೆ?

Most read

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ ಎಂಬ ಅನುಮಾನ ಉಂಟಾಗಿದೆ. ಕಲಬುರಗಿ ನಗರದ ಪೊಲೀಸ್ ಇನ್ಸ್​ಪೆಕ್ಟರ್ ವೊಬ್ಬರ ಮೊಬೈಲ್​ಗೆ ಈ ಬೆದರಿಕೆಯ ಆಡಿಯೋ ಸಂದೇಶ ಬಂದಿದೆ.

ಪೊಲೀಸ್ ಇನ್ಸ್​ಪೆಕ್ಟರ್ ಅವರು ಆಡಿಯೋ ಬೆದರಿಕೆ ಮೆಸೇಜ್‌ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅನಿತಾ ಅವರು ಸಿಸಿಟಿವಿ ಕಣ್ಗಾವಲಿನಲ್ಲೇ ಕಾರು ಪಾರ್ಕ್ ಮಾಡುವಂತೆ ತಮ್ಮ ವಾಹನ ಚಾಲಕರಿಗೆ ಸೂಚನೆ ನೀಡಿದ್ದಾರೆ.  ಕೇವಲ ಒಂದೂವರೆ ತಿಂಗಳ ಹಿಂದೆ ಕಲಬುರಗಿ ಜೈಲಿಗೆ ಮುಖ್ಯ ಅಧೀಕ್ಷಕಿಯಾಗಿ  ವರ್ಗಾವಣೆಯಾಗಿ ಬಂದಿರುವ ಅನಿತಾ ಅವರು ಅಧಿಕಾರ ಸ್ವೀಕಾರ ಮಾಡಿದ ದಿನವೇ ಜೈಲಿನಲ್ಲಿ ಕೈದಿಗಳು ಉನ್ನತ ಮಟ್ಟದ ಜೀವನ ನಡೆಸುತ್ತಿರುವುದನ್ನು ಕಂಡು ದಂಗಾಗಿ ಹೋಗಿದ್ದರು.  ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು  ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದರು. ಅನಿತಾ ಅವರು ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು ಕೈದಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕೈದಿಗಳೇ ಬೆದರಿಕೆ ಸಂದೇಶ ಕಳುಹಿಸಿದ್ದಾರೆಯೇ ಎಂಬ ಶಂಕೆಯೂ ಕಾಡತೊಡಗಿದೆ.  ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಲಾಗಿದೆ. ಅನಿತಾ ಅವರ ವಿರುದ್ಧ ಬುಧವಾರವಷ್ಟೇ ಕೈದಿಗಳು ಪ್ರತಿಭಟನೆ ಮಾಡಿದ್ದರು.

More articles

Latest article