ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಅಲ್ತಾಫ್ ಖಾನ್‌ ಗೆ ದುಬೈನಿಂದ ಬೆದರಿಕೆ ಕರೆ

Most read



ಬೆಂಗಳೂರು: ಕಾಂಗ್ರೆಸ್ ಮುಖಂಡ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಅವ​ರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಜೆ.ಜೆ.ನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ.

ಪಿಎಫ್​ಐ ಸಂಘಟನೆಯ ಜತೆ ಆಟವಾಡಬೇಡ. ಆರ್​ಎಸ್​ಎಸ್​ ಏಜೆಂಟ್​ ನಂತೆ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್​ ಆಗಿದ್ದೀಯಾ. ಇನ್ನು ಮುಂದೆ ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿನ್ನ ತಮ್ಮಂದಿರನ್ನೂ ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್​ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೆ ನಿನ್ನ ಜೀವ ಉಳಿಯುವುದಿಲ್ಲ. ಸಂಘಪರಿವಾರಕ್ಕೆ  ಚಮಚಾಗಿರಿ ಮಾಡಿದರೆ ಪಿಎಫ್​​ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಅಪರಿಚಿತ ವ್ಯಕ್ತಿ ಫೆಬ್ರವರಿ 5ರಂದು ರಾತ್ರಿ 8 ಗಂಟೆ ವೇಳೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ.

ಈ ಪ್ರಕರಣವನ್ನು ಜೆಜೆ ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ತನಿಖೆ ಸಂದರ್ಭದಲ್ಲಿ  ದುಬೈ ನಿಂದ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ದುಬೈ ಮೂಲದ ವ್ಯಕ್ತಿ ಜೊತೆ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

More articles

Latest article