ಸಂಚಾರಿ ಪೊಲೀಸರ ಯಡವಟ್ಟಿಗೆ ಮೂರುವರೆ ವರ್ಷದ ಮಗು ಸಾವು; ಪೋಷಕರ ಆಕ್ರಂದನ, ಮೂವರು ಎಎಸ್‌ ಐ ಗಳ ಅಮಾನತು

Most read

ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಎಂದು ತಿಳಿದು ಬಂದಿದೆ.

ಮಗುವಿನ ಪೋಷಕರು ಪುತ್ರಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಆಗ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಮಗುವೂ ಕೆಳಗೆ ಬಿದ್ದಿದೆ. ಹಿಂದಿನಿಂದ ಬರುತ್ತಿದ್ದ ವಾಹನ ಮಗುವಿನ ಮೇಲೆ ಹರಿದಿದೆ. ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಮಗುವಿನ ಪೋಷಕರು ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ರೋದಿಸುತ್ತಿದ್ದ ದೃಶ್ಯ ಮನ ಕಲಕುವಂತಿತ್ತು. ಸಾರ್ವಜನಿಕರು ಜಮಾಯಿಸಿ ಪೊಲೀಸರ ವಿರುದ್ಧ ರಸ್ತೆ ತಡೆದು ಪ್ರತಿಭಟನೆ ನಡೆಸಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಮಂಡ್ಯ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳದಲ್ಲಿದ್ದ ಆರು ಪೊಲೀಸರ ಪೈಕಿ ಮೂವರು ಎಎಸ್‌ ಐ ಗಳಾದ ಜಯರಾಮ್, ನಾಗರಾಜ್, ಗುರುದೇವ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಗೆ ವಿಷಾದಿಸುತ್ತಿದ್ದೇನೆ, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

More articles

Latest article