ಈಜಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರು

ಚಿಕ್ಕೋಡಿ: ಬಿಸಿಲಿನ ಝಳಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಇವರೆಲ್ಲರೂ ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವುದು ತಿಳಿದು ಬಂದ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಚಿಕ್ಕೋಡಿ ತಹಶೀಲ್ದಾರ್‌ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸಲಾಗಿದೆ. ಪ್ರಕರಣವನ್ನು ದಾಖಲಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read