ಭಾರತ ಟೆಸ್ಟ್‌ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

Most read

ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಶನಿವಾರ ಮುಂಬೈನಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಕನ್ನಡಿಗರಾದ ಕೆ.ಎಲ್. ರಾಹುಲ್, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತಂಡದ ನಾಯಕರಾಗಿ ಶುಭಮನ್ ಗಿಲ್, ಉಪನಾಯಕರಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ. ದಜೂನ್‌ 20 ರಿಂದ ಟೆಸ್ಟ್‌ ಸರಣಿ ಆರಂಭವಾಗಲಿದೆ.

ಭಾರತ ತಂಡದ ಆಟಗಾರರು: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್/ ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ದೃವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್‌ ಸುಂದರ್, ಶಾರ್ದೂಲ್ ಠಾಕೂರ್, ಬೂಮ್ರಾ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.

More articles

Latest article