ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿದು ಕೊಪ್ಪಳ ಮಗು ಸೇರಿ ಮೂವರ *ವು

ಶಿವಮೊಗ್ಗ:  ತೀರ್ಥಹಳ್ಳಿಯಲ್ಲಿ ಒಂದೇ ಸಮ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡಕುಸಿದು 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ಸಿಬಿನಕೆರೆ ಸಮೀಪದ ಗಾಂಧಿನಗರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಮೃತರನ್ನು ಕೊಪ್ಪಳ ಜಿಲ್ಲೆಯ ಮಲ್ಲಿಕಾರ್ಜುನ (35), ಪತ್ಬಿ ನಾಗವೇಣಿ(28) ಹಾಗೂ 3 ವರ್ಷದ ಮಗು ಸಂತೋಷ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶೆಡ್​ನಲ್ಲಿ ವಾಸವಾಗಿದ್ದವರ ಮೇಲೆ ಗುಡ್ಡ ಕುಸಿತವಾಗಿದೆ. ಇವರನ್ನು ರಕ್ಷಿಸಲು ಪ್ರಯತ್ನಿಸಿದ ಓರ್ವ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ತೀರ್ಥಹಳ್ಳಿ ಪೊಲೀಸರು ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ಶೆಡ್​ನಲ್ಲಿ ಬೇರೆವರು ಇದ್ದಾರೆಯೇ ಎಂದು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ. ಶೆಡ್​ನಲ್ಲಿ ಮಲಗಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕರ ಭೇಟಿ: ಮೂರು ಜನ ಗಂಗಾವತಿ ತಾಲೂಕಿನ ಕಾರ್ಮಿಕರು ಮಣ್ಣಿನಲ್ಲಿ ಹೂತು ಹೋಗಿದ್ದಾರೆ. ಇನ್ನು ಬೇರೆ ಸಿಲುಕಿಕೊಂಡವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.

ಘಟನಾ ಸ್ಥಳದಿಂದಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಮಾತನಾಡಿ, ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೋರಿದ್ದೇನೆ. ಈಗಾಗಲೇ ಗುಡ್ಡದ ಪಕ್ಕದಲ್ಲಿ ವಾಸಿಸುತ್ತಿದ್ದ ಸುಮಾರು 8 ಕುಟುಂಬಗಳಿಗೆ ಸ್ಥಳಾಂತರಿಸಿದ್ದೇವೆ. ಒಬ್ಬ ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಾಯಕಾರಿ ಸ್ಥಳದಿಂದ ಇನ್ನೂ ಕೆಲವರನ್ನು ಸ್ಥಳಾಂತರಿಸಲು ಯೋಚಿಸಿದ್ದೇವೆ ಎಂದರು.

More articles

Latest article

Most read