Sunday, March 22, 2026

ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಕಾಂಗ್ರೆಸ್ ಟಿಕೇಟ್‌ ಘೋಷಣೆ

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಟಿಕೆಟ್ ಘೋಷಣೆ : ಎರಡೂ ಕ್ಷೇತ್ರಗಳಲ್ಲೂ ಕುಟುಂಬಕ್ಕೆ ಮಣೆ ಹಾಕಿದ ಕಾಂಗ್ರೆಸ್‌

ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.  ದಾವಣಗೆರೆ ದಕ್ಷಿಣಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಮಲ್ಲಿಕಾರ್ಜುನ್‌ಗೆ ಟಿಕೆಟ್‌ ನೀಡಿದರೆ, ಅತ್ತ ಬಾಗಲಕೋಟೆಗೆ ಉಮೇಶ್‌ ಮೇಟಿಗೆ ಟಿಕೆಟ್‌ ನೀಡಲಾಗಿದೆ.
ಶುಕ್ರವಾರವೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಾಳೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಶುಕ್ರವಾರವಷ್ಟೇ ಚರ್ಚೆ ನಡೆಸಿದ್ದರು. ಅಲ್ಲದೆ, ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು.

ಈ ಮಧ್ಯೆ, ತಮ್ಮ ಪುತ್ರ ಸಮರ್ಥ್‌ಗೆ ಬಿ.ಫಾರಂ ನೀಡಬೇಕು ಎಂದು ಸಚಿವ ಮಲ್ಲಿಕಾರ್ಜುನ ಅವರು ಸಭೆಯಲ್ಲಿ ಪಟ್ಟು ಹಿಡಿದಿದ್ದರು ಎಂದು ಹೇಳಲಾಗಿದೆ.

More articles

Latest article

Most read