Thursday, December 12, 2024

ಟಿಪ್ಪು ಜಯಂತಿ: ನಿಷೇಧಾಜ್ಞೆ ಜಾರಿ

Most read

ಮಂಡ್ಯ: ಮೈಸೂರು ಹುಲಿ ಟಿಪ್ಪು ಜಯಂತಿ ಅಂಗವಾಗಿ ನಾಳೆ, ಭಾನುವಾರ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.


ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜನರು ಗುಂಪುಗೂಡುವಂತಿಲ್ಲ, ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಯಾವುದೇ ಸಭೆ ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ

More articles

Latest article