ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಚುನಾವಣ ಟಿಕೆಟ್: ಸಿಎಂ ಚಂದ್ರಬಾಬು ನಾಯ್ಡು

Most read

ತಿರುಪತಿ: ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸರಪಂಚ್, ಪುರಸಭೆಯ ಕೌನ್ಸಿಲರ್ ಅಥವಾ ಮೇಯರ್ ಆಗಲು ಸಾಧ್ಯ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ತಿರುಪತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಹೊಸದಾಗಿ ಮದುವೆಯಾದವರು ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. ಒಂದು ಕಾಲದಲ್ಲಿ ಹೆಚ್ಚು ಮಕ್ಕಳಿರುವ ವ್ಯಕ್ತಿಗಳಿಗೆ ಪಂಚಾಯತ್ ಚುನಾವಣೆ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿರಲಿಲ್ಲ. ಆದರೆ, ಈಗ ಕಡಿಮೆ ಸಂಖ್ಯೆಯ ಮಕ್ಕಳನ್ನು ಹೊಂದಿರುವವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲಎಂಬ ನಿಯಮ ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ನೀವು (ಟಿಕಿಟ್‌ ಆಕಾಂಕ್ಷಿಗಳು) ಸರಪಂಚ್, ಪುರಸಭೆಯ ಕೌನ್ಸಿಲರ್, ಮೇಯರ್ ಆಗಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ಹಳೆಯ ತಲೆಮಾರಿನವರು ಹೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನೀವು ಒಂದು ಮಗುವನ್ನು ಮಾತ್ರ ಪಡೆಯುತ್ತಿದ್ದೀರಿ. ನಿಮ್ಮ ಪೋಷಕರು ನಿಮ್ಮಂತೆಯೇ ಯೋಚಿಸಿದ್ದರೆ, ನೀವು ಈ ಜಗತ್ತಿಗೆ ಬರುತ್ತಿರಲಿಲ್ಲ ಎಂದೂ ಅವರು ಹೇಳಿದ್ದಾರೆ.

More articles

Latest article