ಮತದಾರರ ಮತದಾನದ ಹಕ್ಕಿಗಾಗಿ ಹೋರಾಟ ಅನಿವಾರ್ಯ: ರಾಹುಲ್ ಗಾಂಧಿ

Most read

ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌)  ಆರೋಪಗಳಿಗೆ ಸಂಬಂಧಿಸಿದಂತೆ  ಇಂಡಿಯಾ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. 

ಇಂಡಿಯಾ ಮೈತ್ರಿಕೂಟದ ಸಂಸದರು ಸಂಸತ್‌ ಭವನದಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಜ್ಯದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು ಪತ್ತೆಯಾಗಿದ್ದಾರೆ. ಆದರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ದೇಶದ ಮುಂದೆ ಸತ್ಯಾಂಶವನ್ನು ಬಿಚ್ಚಿಟ್ಟಿದ್ದೇವೆ.ಇಂದು ಹಮ್ಮಿಕೊಂಡಿರುವ ಪ್ರತಿಭಟನೆ ಕೇವಲ ರಾಜಕೀಯ ಹೋರಾಟ ಅಲ್ಲ. ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಅವರು ಹೇಳಿದರು.

ಆದರೆ ಈ ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರನ್ನು ತಡೆದಿದ್ದಾರೆ. ಇದರಿಂದ ಕೆರಳಿದ ಹಲವು ಸಂಸದರು ಬ್ಯಾರಿಕೇಡ್‌ ಗಳನ್ನು  ಹತ್ತುವ ಪ್ರಯತ್ನ ನಡೆಸಿದ್ದಾರೆ. ಪ್ರತಿಭಟನೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟದ ನಾಯಕರು ನಡುರಸ್ತೆಯಲ್ಲೇ ಕುಳಿತು ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

More articles

Latest article