ತುಮಕೂರಿನಲ್ಲಿ ಶೌಚ ಗುಂಡಿ ಶುಚಿಗೊಳಿಸಿದ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ

ತುಮಕೂರು :  ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಘಟನೆ ನಡೆದು 3 ದಿನಗಳು ಆಗಿದ್ದರೂ, ತಪ್ಪಿತಸ್ಥರನ್ನು ಈವರೆಗೆ ಬಂಧಿಸಲಾಗಿಲ್ಲ ಹಾಗೂ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಸರಿಯಾದ ಕ್ರಮ ಜರುಗಿಸದ ಕಾರಣ ಆಯೋಗ ಮಧ್ಯ ಪ್ರವೇಶ ಮಾಡಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಅಧಿಕಾರಿಗಳ ಹಂತದಲ್ಲಿ ಮಹಜರು ಇತ್ಯಾದಿ ಪ್ರಕ್ರಿಯೆಗಳು ನಡೆದಿವೆ. ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು  ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ  ಅವರು,   ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.

ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

More articles

Latest article

Most read