ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ; ಬೆಳಗ್ಗೆ 7 ಗಂಟೆಯಿಂದ ಓಟಿಂಗ್ ಶುರು

Most read

ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ನಿನ್ನೆ ಸಂಜೆಯೇ ತೆರೆ ಬಿದ್ದಿದೆ. 14 ಕ್ಷೇತ್ರಗಳ ಅಭ್ಯರ್ಥಿಗಳು ಇಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ನಾಳೆಯೇ ಕರ್ನಾಟಕ 14 ಜಿಲ್ಲೆಗಳಲ್ಲಿ ಮತದಾನ ಇದ್ದು ಚುನಾವಣಾ ಆಯೋಗ ಭರ್ಜರಿ ತಯಾರಿ ಮಾಡಿಕೊಂಡಿದೆ.

ಮನೆ ಮನೆ ಪ್ರಚಾರದ ವೇಳೆ ಅಭ್ಯರ್ಥಿ ಜೊತೆ 5 ಜನಕ್ಕಿಂತ ಹೆಚ್ಚು ಜನರು ಇರುವಂತಿಲ್ಲ. ಧ್ವನಿ ವರ್ಧಕ ಬಳಸದೇ ಮತಯಾಚನೆ ಮಾಡಬಹುದಾಗಿದೆ. ಇನ್ನು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಬಿಟ್ಟು ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು ಕಾಣಿಸಿಕೊಳ್ಳುವಂತಿಲ್ಲ. ಮತದಾನಕ್ಕೂ 48 ಗಂಟೆ ಮೊದಲು ಶೂನ್ಯ ಅವಧಿ ಹಿನ್ನೆಲೆ ಯಾವುದೇ ರೀತಿ ಅಬ್ಬರದ ಪ್ರಚಾರ ನಡೆಸುವಂತಿಲ್ಲ ಎಂದು ಆಯೋಗ ನಿಯಮವನ್ನು ನೀಡಿದೆ.

ನಾಳೆಯೇ ಕರ್ನಾಟಕ 14 ಜಿಲ್ಲೆಗಳಲ್ಲಿ ಮತದಾನ ಇದ್ದು, ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯಲಿದೆ.

More articles

Latest article