ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 23.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸರ್ಕಾರಿ/ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಆದೇಶ ಹೊರಡಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

                                    