ಪಾರದರ್ಶಕತೆ: ಆಸ್ತಿ ಘೋಷಣೆ ಮಾಡಲಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು

Most read

ನವದೆಹಲಿ: ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಅಧಿಕಾರ ಸ್ವೀಕರಿಸಿದ ಕೂಡಲೇ ಆಸ್ತಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದ್ದಾರೆ.

ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲಾ ನ್ಯಾಯಮೂರ್ತಿಗಳು ಹಾಜರಿದ್ದ ಸಭೆ) ತಮ್ಮ ಆಸ್ತಿಯನ್ನು ಘೋಷಿಸಲು ನ್ಯಾಯಮೂರ್ತಿಗಳು ನಿರ್ಧರಿಸಿದ್ದು, ಅದರ ದತ್ತಾಂಶಗಳನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ನ್ಯಾಯಮೂರ್ತಿಗಳು ಸ್ವಯಂ ಪ್ರೇರಿತರಾಗಿ ಆಸ್ತಿ ಘೋಷಣೆ ಮಾಡಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ 30 ನ್ಯಾಯಮೂರ್ತಿಗಳು ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ಹಾಗೂ ದೊಡ್ಡ ಸ್ವರೂಪದ ಯಾವುದೇ ಆಸ್ತಿ ಕೊಂಡಾಗಲೆಲ್ಲಾ ಸಿಜೆಐಗೆ ತಮ್ಮ ಆಸ್ತಿಗಳ ಘೋಷಣೆಯನ್ನು ಮಾಡಬೇಕೆಂದು ಸುಪ್ರೀಂ ಕೋರ್ಟ್‌ನ ಫುಲ್ ಕೋರ್ಟ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವೆಬ್‌ಸೈಟ್ ತಿಳಿಸಿದೆ.

More articles

Latest article