ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ ಮಾಡುವಂತಿಲ್ಲ. ಈ ಮುಷ್ಕರ ಕಾನೂನು ಬಾಹೀರ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರಿದ್ದ ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ಛೀಮಾರಿ ಹಾಕುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಹಿಂಪಡೆದಿದ್ದಾರೆ. ಮುಷ್ಕರವನ್ನು ಕೈಬಿಟ್ಟಿರುವುದಾಗಿ ಸಾರಿಗೆ ನೌಕರರ ಪರ ವಕೀಲರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಹೈಕೋರ್ಟ್ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಾರಿಗೆ ಜಂಟಿ ಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾದರು. ನಾಳೆ ಮುಷ್ಕರ ನಡೆಸುವುದಿಲ್ಲವೆಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನಾಳೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಾರಿಗೆ ಸಂಘಟನೆಗಳ ಪರ ವಕೀಲರಿಗೆ ಹೈಕೋರ್ಟ್ ಎಚ್ಚರಿಕೆ ನೀಡಿತು.