ನವದೆಹಲಿ: ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ನೆರವು ನೀಡದಿದ್ದಲ್ಲಿ ಭಾರತ ದೇಶದ ಮೇಲಿನ ಸುಂಕವನ್ನು ಹೆಚ್ಚಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಒಡ್ಡಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಿರುವುದಕ್ಕೆ ಡೊನಾಲ್ಡ್ ಟ್ರಂಪ್ ಈ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗುತ್ತಿದೆ.
ಏರ್‌ಫೋರ್ಸ್ ಒನ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ ಎಂದು ಕೆಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ನನ್ನನ್ನು ತೃಪ್ತಿಗೊಳಿಸಬೇಕು ಎಂದು ಬಯಸಿದ್ದಾರೆ. ಅವರು ಒಳ್ಳೆಯ ವ್ಯಕ್ತಿ ಎಂಬುದನ್ನು ನಾನು ಬಲ್ಲೆ. ನಾನು ಅತೃಪ್ತಗೊಂಡಿದ್ದೇನೆ ಎನ್ನುವುದು ಮೋದಿ ಅವರಿಗೆ ತಿಳಿದಿದೆ ಎನ್ನುವುದೂ ನನಗೆ ಗೊತ್ತಿದೆ. ಭಾರತ ವ್ಯಾಪಾರ ಮಾಡಿಕೊಂಡಿರಲಿ. ಆ ದೇಶದ ಮೇಲಿನ ಸುಂಕವನ್ನು ನಾವು ಶೀಘ್ರದಲ್ಲೇ ಏರಿಕೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

