Thursday, July 25, 2024

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು

Most read

ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಶಸ್ತ್ರ ಚಿಕಿತ್ಸೆಯಲ್ಲಿ ಐದು ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವು ಕಂಡಿದ್ದಾರೆ. ಎಲ್ಲಾ ಮಹಿಳೆಯರು ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರಚಿಕಿತ್ಸೆಯಲ್ಲಿ ಈ ಸಾವು ಸಂಭವಿಸಿದೆ.

ಫೆ.22ನೇ ತಾರೀಕು 7 ಮಂದಿಗೆ ಹೆರಿಗೆ ಸೇರಿದ್ದಂತೆ ವಿವಿಧ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ‌ ಅನಿತಾ ಮೊದಲಿಗೆ ಸಾವು ಕಂಡರು. 30 ವರ್ಷದ ಅನಿತಾ ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಬಲಿಯಾದ್ದಾರೆ.

ಇನ್ನು ರಾಜವಂತಿ ಮೂಲದ ಅಂಜಲಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು.‌ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 24 ರಂದು ಸಾವನ್ನಪ್ಪಿದ್ದಾರೆ. ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ನರಸಮ್ಮ ಅವರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಚಿಕಿತ್ಸೆ ಫಲಕಾರಿಯಾಗದೆ 25ನೇ ತಾರೀಕು ನರಸಮ್ಮ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಕಂಡರು.

ಈ ಮೂವರು 22ನೇ ತಾರೀಕು ಶಸ್ತ್ರ ಚಿಕಿತ್ಸೆ ಒಳಗಾಗಿದ್ದರು. 7 ಮಂದಿ ಶಸ್ತ್ರ ಚಿಕಿತ್ಸೆಯನ್ನು ಡಾ. ಪೂಜಾ ನಡೆಸಿದ್ದರು. 7 ಜನರಲ್ಲಿ ಉಳಿದ ನಾಲ್ವರು ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಯುತ್ತಿದೆ.

More articles

Latest article