ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಸುರಂಗ ರಸ್ತೆ: ಸಚಿವ ಸಂಪುಟ ಒಪ್ಪಿಗೆ

Most read

ರಾಜಧಾನಿಯ ಸಂಚಾರ ದಟ್ಟಣೆ ತಗ್ಗಿಸಲು ಹೆಬ್ಬಾಳದ ಎಸ್ಟೀಮ್‌ ಮಾಲ್‌ ಜಂಕ್ಷನ್‌ನಿಂದ ಸಿಲ್‌್ಕಬೋರ್ಡ್‌ನ ಕೆಎಸ್‌ಆರ್‌ಪಿ ಜಂಕ್ಷನ್‌ವರೆಗೆ ಸುರಂಗ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿದ್ದು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಒಟ್ಟು 18 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದ್ದು, 12,690 ಕೋಟಿ ವೆಚ್ಚದ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಡಿಪಿಆರ್‌ ಸಿದ್ಧವಾದ ಬಳಿಕ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿಸುರಂಗ ರಸ್ತೆ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಮೆಟ್ರೊ ರೈಲು ಮಾರ್ಗಕ್ಕೆ ಸಮಾನಾಂತರವಾಗಿ ಸುರಂಗ ರಸ್ತೆ ನಿರ್ಮಾಣಗೊಳ್ಳಲಿದೆ.

ಹೆಬ್ಬಾಳದ ಎಸ್ಟೀಮ್‌ ಮಾಲ್‌ ಜಂಕ್ಷನ್‌, ಅರಮನೆ ರಸ್ತೆ, ಗಾಲ್‌್ಫ ಕೋರ್ಸ್‌ ರಸ್ತೆ, ಜಯನಗರದ ಅಶೋಕ ಪಿಲ್ಲರ್‌ ಹಾಗೂ ಸಿಲ್‌್ಕಬೋರ್ಡ್‌ ಜಂಕ್ಷನ್‌ನಲ್ಲಿಸುರಂಗ ರಸ್ತೆಯ ಪ್ರವೇಶ, ನಿರ್ಗಮನ ದ್ವಾರಗಳಿರಲಿವೆ. ತಳಭಾಗದ ಮೂರು ಪಥ ಮತ್ತು ಮೇಲ್ಭಾಗದ ಎರಡು ಪಥದ ರಸ್ತೆಯಲ್ಲಿಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಸುರಂಗ ರಸ್ತೆಯು ಹೆಬ್ಬಾಳದ ಎಸ್ಟೀಮ್‌ ಮಾಲ್‌ ಜಂಕ್ಷನ್‌ನಿಂದ ಮೇಖ್ರಿ ವೃತ್ತ, ಅರಮನೆ ರಸ್ತೆ, ಗಾಲ್ಫ್ ಕೋರ್ಸ್‌ ರಸ್ತೆ, ಚಾಲುಕ್ಯ ವೃತ್ತ, ಕಬ್ಬನ್‌ಪಾರ್ಕ್, ಕೆ.ಎಚ್‌.ರಸ್ತೆ, ಲಾಲ್‌ಬಾಗ್‌, ಜಯನಗರ ಮಾರ್ಗವಾಗಿ ಸಿಲ್‌್ಕಬೋರ್ಡ್‌ ಜಂಕ್ಷನ್‌ಗೆ ಹಾದು ಹೋಗಲಿದೆ.

More articles

Latest article