Saturday, September 14, 2024

ರಾಜ್ಯದಲ್ಲಿ ಮಂಗನ ಕಾಯಿಲೆಗೆ ಇಬ್ಬರು ಬಲಿ : 12 ದಿನಗಳಲ್ಲಿ 25 ಪ್ರಕರಣ ದಾಖಲು!

Most read

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ  ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ  ಇಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.


ಆರೋಗ್ಯ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ ಮಂಗನ ಕಾಯಿಲೆ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆಯಿಂದಾಗಿ (Kyasanur Forest Disease –  ಕೆಎಫ್‌ಡಿ) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ 18 ವರ್ಷದ ಬಾಲಕಿ ವೈರಸ್‌ಗೆ ಬಲಿಯಾಗಿದ್ದಾಳೆ ಎಂದಿ ಜನವರಿ 8 ರಂದು ವರದಿಯಾಗಿದೆ. ಇದು ಈ ವರ್ಷದ ಮೊದಲ ಮಂಗನ ಕಾಯಿಲೆಯಿಂದಾದ ಸಾವು ಎಂದು ವರದಿಯಾಗಿದೆ. ಎರಡನೇ ಸಾವು ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವರದಿಯಾಗಿದ್ದು, ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ 79 ವರ್ಷದ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ, ರಾಜ್ಯದಲ್ಲಿ 49 ಮಂಗ ಜ್ವರದ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ 34 ಪ್ರಕರಣಗಳು ವರದಿಯಾಗಿವೆ, ನಂತರ ಶಿವಮೊಗ್ಗದಲ್ಲಿ 12 ಮತ್ತು ಉಳಿದ ಮೂರು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಎಫ್‌ಡಿ ಪ್ರಕರಣಗಳು ಮತ್ತು ಎರಡು ಸಾವುಗಳ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ. ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಡಿ ರಂದೀಪ್ ಶನಿವಾರ ಶಿವಮೊಗ್ಗಕ್ಕೆ ಭೇಟಿ ನೀಡಿ ಕೆಎಫ್‌ಡಿ ಪ್ರಕರಣಗಳು ವರದಿಯಾಗಿರುವ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ರಾಜ್ಯ ಆರೋಗ್ಯ ಆಯುಕ್ತರ ಪ್ರಕಾರ, ಈ ವರ್ಷದ ಜನವರಿ 1 ರಿಂದ, ಆರೋಗ್ಯ ಇಲಾಖೆಯು ಕೆಎಫ್‌ಡಿ ಪ್ರಕರಣಗಳು ವರದಿಯಾದ ಜಿಲ್ಲೆಗಳಿಂದ 2,288 ಮಾದರಿಗಳನ್ನು ಸಂಗ್ರಹಿಸಿದೆ ಮತ್ತು ಅವುಗಳಲ್ಲಿ 48 ಕೇಸ್ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 10 ರಿಂದ 12 ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಕಂಡು ಬಂದಿದೆ. ಪ್ರಮುಖ ಮೂರು ಜಿಲ್ಲೆಗಳಲ್ಲಿ ಕಟ್ಟು ನಿಟ್ಟ ಕ್ರಮವಹಿಸಲಾಗಿದೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ DEPA ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಸೂಚನೆ ನೀಡಿದ್ದೇವೆ. DEPA ತೈಲವನ್ನು ಉಚಿತವಾಗಿ ಎಲ್ಲ ಕುಟುಂಬಗಳಿಗೆ ನೀಡಲಾಗಿದೆ ಎಂದು ರಂದೀಪ್ ಹೇಳಿದ್ದಾರೆ.

More articles

Latest article